Site icon PowerTV

ರಾಹುಲ್ ಗಾಂಧಿ ವಿರುದ್ದ FIR ದಾಖಲು!

ಗುವಾಹಟಿ: ಕಾಂಗ್ರೆಸ್​ ಪಕ್ಷದಿಂದ ನಡೆಯುತ್ತಿರುವ ನ್ಯಾಯ್ ಯಾತ್ರೆಯ ವೇಳೆ ಉದ್ದೇಶಪೂರ್ವಕವಾಗಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಒಣ ಹವೆ ಮುಂದುವರಿಕೆ!

ಭಾರತ್ ಯಾತ್ರ ಬಳಿಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಪ್ರಸ್ತುತ ಅಸ್ಸಾಂನಲ್ಲಿದೆ ಮತ್ತು ಗುವಾಹಟಿಗೆ ಪ್ರವೇಶಿಸುವ ವೇಳೆ ಪಕ್ಷದ ಬೆಂಬಲಿಗರು ಮತ್ತು ಮುಖಂಡರು ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಂದು ಉದ್ದೇಶಪೂರ್ವಕವಾಗಿ ಹಿಂಸಾಚಾರ, ಪ್ರಚೋದನೆ, ಸಾರ್ವಜನಿಕ ಆಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಇತರ ವ್ಯಕ್ತಿಗಳ ವಿರುದ್ಧ ಸೆಕ್ಷನ್ 120(ಬಿ)143/ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Exit mobile version