Site icon PowerTV

ಲೋಕಸಭೆ ಟಿಕೆಟ್ ಗಾಗಿ ಕೆ.ಸುಧಾಕರ್ ಕಸರತ್ತು!

ಬೆಂಗಳೂರು: ಮಾಜಿ ಸಚಿವ ಡಾ.ಕೆ ಸುಧಾಕರ್ ಬಿಜೆಪಿ ವರಿಷ್ಠರನ್ನ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ನಿನ್ನೆಯೇ ದೆಹಲಿಗೆ ತೆರಳಿರುವ ಸುಧಾಕರ್, ದೆಹಲಿಯ ಬಿಜೆಪಿ ನಾಯಕರನ್ನ ಭೇಟಿ ಮಾಡಿ ಟಿಕೆಟ್ ಪೆಡಯಲು ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ!

ಸದ್ಯ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸುಧಾಕರ್ ಪ್ರಯತ್ನಿಸುತ್ತಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಸುಧಾಕರ್. ಈಗ ಮತ್ತೆ ರಾಜಕೀಯ ಭವಿಷ್ಯ ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಬಿ.ಎಲ್.ಸಂತೋಷ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ನಡ್ಡಾ ಅವರು ಸಮಯ ಕೊಟ್ಟರೇ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಫರ್ಧಿಸಲು ಮಾಜಿ ಸಚಿವ ಸುಧಾಕರ್​ ಸೇರಿದಂತೆ ಹಲವು ಮುಖಂಡರು ರೇಸ್​ ನಲ್ಲಿದ್ದಾರೆ ಎನ್ನಲಾಗಿದೆ.

Exit mobile version