Site icon PowerTV

ನನ್ನ ಹೆಸರು ಸಿದ್ದ’ರಾಮ’ಯ್ಯ, ನಮ್ಮಪ್ಪ ಸಿದ್ದ’ರಾಮೇ’ಗೌಡ, ನಾವು ಹಿಂದೂಗಳಲ್ವಾ? : ಸಿದ್ದರಾಮಯ್ಯ

ಮೈಸೂರು : ನನ್ನ ಹೆಸರು ಸಿದ್ದರಾಮಯ್ಯ. ನನ್ನ ಹೆಸರಲ್ಲೇ ರಾಮ ಇದ್ದಾನೆ. ನಮ್ಮಪ್ಪನ ಹೆಸರು ಸಿದ್ದರಾಮೇಗೌಡ. ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ, ಸಿದ್ದರಾಮೇಗೌಡ, ನಾವ್ಯಾರೂ ಹಿಂದೂಗಳಲ್ವಾ..? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಮತ್ತೆ ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು.

ಬಿಜೆಪಿಯವರು ಜನರನ್ನು ಮರಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಅಧಿಕಾರ ಹಿಡಿದು ಕುಳಿತಿದ್ದಾರೆ. ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ, ವ್ರತ ಮಾಡುತ್ತಾರಂತೆ. ನಾವು ರಾಮನ ಪೂಜೆ ಮಾಡಲ್ವಾ..? ರಾಮನ ಭಜನೆ ಮಾಡಲ್ವಾ..? ಧನುರ್ ಮಾಸದಲ್ಲಿ ನಾನೂ ಬೆಳಗ್ಗೆ ಎದ್ದು ದೇವಸ್ಥಾನಕ್ಕೆ ಹೋಗಿ ರಾಮನ ಭಜನೆ ಹಾಡುತ್ತಿದ್ದೆ ಎಂದು ತಿಳಿಸಿದರು.

ಬಿಜೆಪಿಯವರನ್ನು ನೀವು ನಂಬಬೇಡಿ

ಮೊನ್ನೆ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದೆ. ಜೈ ಶ್ರೀರಾಮ್ ಅಂತ ಘೋಷಣೆ ಕೂಗಿಸಿದೆ. ನನ್ನ ಹೆಸರು ಸಿದ್ದರಾಮಯ್ಯ. ನನ್ನ ಹೆಸರಲ್ಲೇ ರಾಮ ಇದ್ದಾನೆ. ನಮ್ಮಪ್ಪನ ಹೆಸರು ಸಿದ್ದರಾಮೇಗೌಡ. ನಾವ್ಯಾರೂ ಹಿಂದೂಗಳಲ್ವಾ? ಬಿಜೆಪಿಯವರು ಭಾವನೆಗಳ ಮೇಲೆ ಮತ ಕೇಳುತ್ತಾರೆ. ಅವರನ್ನು ನೀವು ನಂಬಬೇಡಿ ಎಂದು ಸಿದ್ದರಾಮಯ್ಯ ಹೇಳಿದರು.

Exit mobile version