Site icon PowerTV

ಲೋಕಸಭೆ ಚುನಾವಣೆಯಲ್ಲಿ ನಾವು ಗೆದ್ದೆ ಗೆಲ್ಲುತ್ತೇವೆ: ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ವಾತಾವರಣ ಇದೆ. ಲೋಕಸಭೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇರುತ್ತಾ ಎಂಬ ಸಚಿವ ರಾಜಣ್ಣ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಗೆದ್ದಿದ್ದೇವೆ ಅಂತ ವಿಶ್ವಾಸ ಇದೆ. 28 ಸೀಟ್ ಗೆಲ್ಲಬೇಕೆಂದು ಬಯಸಿದ್ದೇವೆ.

ಇದನ್ನೂ ಓದಿ: ಕಾಂಗ್ರೆಸ್ಸಿಗರು ಬಾಬರ್ ಸಂತತಿಯನ್ನು ಪ್ರೀತಿಸಿದಷ್ಟು ಅವರಪ್ಪಂದಿರನ್ನು ಪ್ರೀತಿಸಿರಲ್ಲ!: ಸಿ.ಟಿ ರವಿ

ಈ ಹಿಂದೆ ಕಾಂಗ್ರೆಸ್ ಪಕ್ಷ 27 ಸೀಟ್ ಗೆದ್ದಿದ್ದನ್ನು ಸ್ಮರಿಸಬೇಕು ಎಂದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಂದ ಒಳ್ಳೆ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಎಂಟು ತಿಂಗಳಲ್ಲಿ ಜನಪರ ಆಡಳಿತ ನೀಡಿರುವುದರಿಂದ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Exit mobile version