Site icon PowerTV

ನಾಳೆ 75ನೇ ಗಣರಾಜ್ಯೋತ್ಸವ ಆಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಭದ್ರತೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 75ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣೆಕ್ಷಾ ಪರೇಡ್ ಮೈದಾನವು ಸಂಪೂರ್ಣವಾಗಿ ಸಿದ್ಧಗೊಂಡಿದೆ, 7,000 ಜನರಿಗೆ ಆಸನ ವ್ಯವಸ್ಥೆ, ಭದ್ರತಾ ಪಾರ್ಕಿಂಗ್ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿದೆ.

ದೇಶ ಭಕ್ತಿಯ ಪ್ರತೀಕವಾಗಿರುವ ಈ ಸಮಾರಂಭಕ್ಕೆ ಯಾವೆಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂಬುದನ್ನು ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​ ಮತ್ತು ಬೆಂಗಳೂರು ನಗರ ಪೊಲೀಸ್​ ಆಯುಕ್ತ ದಯಾನಂದ ಅವರು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ಸಿಎಂಗೆ ಮುಜುಗರ.. ಚೆಸ್ಕಾಂ ಎಂಡಿ ಶ್ರೀಧರ್ ಅಮಾನತು

9 ಡಿಸಿಪಿ, 16 ಎಸಿಪಿ, 46 ಇನ್ಸ್​ಪೆಕ್ಟರ್​ಗಳು ಸೇರಿದಂತೆ 575 ಅಧಿಕಾರಿಗಳು, 1000 ಸಿಬ್ಬಂದಿ ನಿಯೋಜಿಸಿದ್ದೇವೆ. ಜೊತೆಗೆ ಆರ್ಮಡ್ ಫೋರ್ಸ್, ಶ್ವಾನದಳ ಇರಲಿದೆ. ಬ್ಯಾಗೇಜ್ ಸ್ಕ್ಯಾನರ್ ಮತ್ತು 100 ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ವಾಹನ ಸಂಚಾರದಲ್ಲೂ ಕೆಲ ಬದಲಾವಣೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದೇವೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಬಿ.​ ದಯಾನಂದ್ ಹೇಳಿದರು.

Exit mobile version