Site icon PowerTV

ಕಹಾಂ ಹೈ ಅಚ್ಛೆ ದಿನ್ ಮೋದೀಜಿ..? : ಸಿದ್ದರಾಮಯ್ಯ

ಕೊಡಗು : ಅಚ್ಛೇ ದಿನ್ ಆಯೆಗಾ ಎಂದಿರಿ.. ಕಹಾಂ ಹೈ ಅಚ್ಛೆ ದಿನ್ ಮೋದೀಜಿ..? ಎಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಕೊಡಗು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಲ್ಲಾದರೂ ಜಾರಿಯಾಗಿದೆಯಾ? ಸಣ್ಣ ಉದಾಹರಣೆ ಇದ್ದರೆ ಹೇಳಿ ಎಂದು ಪ್ರಶ್ನಿಸಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ.. ಮಾಡಿದ್ರಾ..? ಎಲ್ಲಿ 20 ಕೋಟಿ ಉದ್ಯೋಗ..? ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ, ಕಡಿಮೆ ಮಾಡಿದ್ರಾ ಮೋದಿಯವರೇ..? ಎಂದು ವಾಗ್ದಾಳಿ ನಡೆಸಿದರು.

120 ಲಕ್ಷ ಕೋಟಿ ಮಾಡಿದ್ದೀರಿ

ದೇಶದ ಸಾಲ ತೀರಿಸಿ ಬಿಡ್ತೀನಿ ಅಂದ್ರಲ್ಲಾ ತೀರಿದೆಯಾ..? ನೀವು ಬರುವ ಮೊದಲು ದೇಶದ ಸಾಲ 53 ಲಕ್ಷ ಕೋಟಿ ಸಾಲ ಇತ್ತು. ನಿಮ್ಮ ಹತ್ತು ವರ್ಷಗಳಲ್ಲಿ ದೇಶದ ಸಾಲ 173 ಲಕ್ಷ ಕೋಟಿ ಆಗಿದೆ. ನಿಮ್ಮೊಬ್ಬರ ಅವಧಿಯಲ್ಲಿ 120 ಲಕ್ಷ ಕೋಟಿ ಮಾಡಿದ್ದೀರಿ. ಇದೆನಾ ನಿಮ್ಮ ಸಾಧನೆ..? ಎಂದು ಸಿದ್ದರಾಮಯ್ಯ ಹರಿಹಾಯ್ದರು.

Exit mobile version