Site icon PowerTV

ನಾನು ಪಕ್ಷ ಬಿಟ್ಟು ಹೋಗುವುದಿಲ್ಲ: ಲಕ್ಷ್ಮಣ್ ಸವದಿ

ಬೆಂಗಳೂರು: ನಾನು ಕಾಂಗ್ರೆಸ್ ಬಿಟ್ಟು ಹೋಗೋದಿಲ್ಲ. ನನ್ನ ನಿಲುವು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಶೆಟ್ಟರ್ ಬಿಜೆಪಿಗೆ ವಾಪಸಾದ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಎಷ್ಟು ಬಾರಿ ಹೇಳಲಿ. ಬಿಜೆಪಿಯವರಿಗೆ ನಮ್ಮ ಅನಿವಾರ್ಯತೆ ಇದೆ. ಹಾಗಾಗಿ ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಗೊಂದಲ ಮೂಡಿಸುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ನಾನು, ಜಗದೀಶ್ ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿ ಕಾಂಗ್ರೆಸ್​ಗೆ ಬಂದಿರಲಿಲ್ಲ. ನಾನು ಮೊದಲು ಕಾಂಗ್ರೆಸ್​ಗೆ ಬಂದೆ. ಟಿಕೆಟ್ ಸಿಗದ ಕಾರಣ ನಂತರ ಶೆಟ್ಟರ್​ ಬಂದರು. ಈಗ ಯಾಕೆ ಬಿಜೆಪಿಗೆ ಹೋಗಿದ್ದಾರೆ ಅಂತ ಗೊತ್ತಿಲ್ಲ. ನಾನು ಅವರು ಸ್ನೇಹಿತರು. ದಿನ ನಾವಿ‌ಬ್ಬರು ಪರಸ್ಪರ ಮಾತನ್ನಾಡುತ್ತೇವೆ. ಆದರೆ ಅವರು ಈ ನಿರ್ಧಾರ ಮಾಡ್ತಾರೆ ಅಂತ ಗೊತ್ತಿರಲಿಲ್ಲ ಎಂದರು.

ಬಿಜೆಪಿಗೆ ನನ್ನ ಅನಿವಾರ್ಯತೆ ಇದೆ

ಲೋಕಸಭೆ ಚುನಾವಣೆ ಹಿನ್ನೆಲೆ ಅವರಿಗೆ ನಮ್ಮ ಅನಿವಾರ್ಯತೆ ಇದೆ. ಹಾಗಾಗಿ ಸಂಪರ್ಕ ಮಾಡ್ತಾ ಇದ್ದಾರೆ ಎಂದರು. ಬೇರೆ ರಾಜಕೀಯ ಚರ್ಚೆ ಇಲ್ಲ. ದೆಹಲಿಗೆ ಹೋಗುವುದಾದರೆ ಹೇಳಿಯೇ ಹೋಗುತ್ತೇನೆ ಎಂದರು.

Exit mobile version