Site icon PowerTV

ಚುನಾವಣಾ ಉಸ್ತುವಾರಿ ನೇಮಿಸಿದ ಬಿಜೆಪಿ : ಕರ್ನಾಟಕಕ್ಕೆ ಅಗರ್ವಾಲ್ ನೇಮಕ

ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೂತನ ಉಸ್ತುವಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿಯರನ್ನು ನೇಮಕ ಮಾಡಲಾಗಿದೆ.

ಬೈಜಯಂತ್ ಪಾಂಡಾ ಅವರನ್ನು ಉತ್ತರ ಪ್ರದೇ ಶದ ನೂತನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಮಹಾರಾಷ್ಟ್ರದ ಬಿಜೆಪಿ ಮುಖಂಡ ವಿನೋದ್ ತಾವ್ಡೆ ಅವರನ್ನು ಬಿಹಾರದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ಓರ್ವ ರಾಜ್ಯ ಸಭಾ ಸದಸ್ಯರು, 12 ಶಾಸಕರು, 4 ಪರಿಷತ್ ಸದಸ್ಯರು, 6 ಮಾಜಿ ಶಾಸಕರು ಸೇರಿದಂತೆ ಇತರರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನ್‌ ದಾಸ್ ಅಗ್ರವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್‌ ರೆಡ್ಡಿ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

Exit mobile version