Site icon PowerTV

ಲಕ್ಷ್ಮಣ ಸವದಿ ಜೊತೆ ನಾನು ಇನ್ನು ಮಾತನಾಡಿಲ್ಲ : ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಪಕ್ಷ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಡಾ.ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲಕ್ಷ್ಮಣ ಸವದಿ ಜೊತೆ ಇನ್ನು ಮಾತನಾಡಿಲ್ಲ. ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಸ್ನೇಹಿತರಾದ ಎಂಎಲ್ಸಿ ರುದ್ರೇಗೌಡ ಅವರ ವಿಶೇಷ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಾಳೆ ಮೈಸೂರಿಗೆ ವಾಪಸ್ ಹೋಗ್ತೇನೆ. ಎಲ್ಲಾ ಕಡೆ ಬಿಜೆಪಿ ಪರ ವಾತಾವರಣ ಇದೆ. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ಪ್ರಧಾನಿಗೆ ರಾಜ್ಯದಿಂದ ಕೊಡುಗೆ ಕೊಡಬೇಕೆಂಬ ಆಸೆ ಇದೆ. ಅದಕ್ಕಾಗಿ ಸಾವಿರಾರು ಕಾರ್ಯಕರ್ತರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಶಾಮನೂರು ಅಭಿಮಾನದಿಂದ ಮಾತಾಡಿದ್ದಾರೆ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಮನೂರು ಶಿವಶಂಕರಪ್ಪನವರು ಅಭಿಮಾನದಿಂದ ಮಾತನಾಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಮಾಡಿರುವ ಒಳ್ಳೆಯ ಕೆಲಸ ನೋಡಿ ಮನವರಿಕೆಯಾಗಿರಬೇಕು. ಒಳ್ಳೆಯ ಅಭಿಪ್ರಾಯ ಕೊಟ್ಟಿರುವುದು ಸ್ವಾಗತಾರ್ಹ. ಕಾಂಗ್ರೆಸ್ ನಾಯಕರಾಗಿ ಈ ರೀತಿ ಹೇಳಿಕೆ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಮಂಡ್ಯ ಟಿಕೆಟ್ ಬಗ್ಗೆ ಇನ್ನು ಚರ್ಚೆ ಆಗಿಲ್ಲ

ಮಂಡ್ಯ ಲೋಕಸಭಾ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಇನ್ನು ಯಾವುದು ಚರ್ಚೆ ಆಗಿಲ್ಲ. ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Exit mobile version