Site icon PowerTV

‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ: ಯತ್ನಾಳ್ ಕಿಡಿ

ಬೆಂಗಳೂರು: ‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಶುಗರ್​ ಫ್ಯಾಕ್ಟರಿಗೆ ನೋಟಿಸ್ ಕೊಡಿಸಿದೆ ಎಂದು ಆರೋಪಿಸಿದ್ದಾರೆ.

ನಾನು ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ನಿರ್ಮಿಸಿದ್ದಾನೆ. ಇದನ್ನೂ ಕಾನೂನು ರೀತಿ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸುತ್ತೇನೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ. ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್​​ಗೆ ಆದೇಶ‌

ಬಡವರನ್ನು, ದೀನ-ದಲಿತರನ್ನು, ಪಕ್ಷದ ಕಾರ್ಯಕರ್ತರನ್ನು ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನುಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ ಎಂದು ಅವರು ಹೇಳಿದ್ದಾರೆ.

ಕಾನೂನು ಹೋರಾಟ ಮಾಡುತ್ತೇನೆ

ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ. ಈ ನಿಟ್ಟಿನಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.

ಪರಿಸರ ನಿಯಮಾವಳಿ ಉಲ್ಲಂಘನೆ

ಯತ್ನಾಳ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ.

 

 

Exit mobile version