Site icon PowerTV

ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್​​ಗೆ ಆದೇಶ‌

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್​​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ.

ಚಿಂಚೋಳಿ ತಾಲ್ಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಿದ್ದಶ್ರೀ ಸಕ್ಕರೆ ಕಾರ್ಖಾನೆ ವಿರುದ್ಧ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬಿಡಲಾಗುತ್ತಿತ್ತು ಎನ್ನೋ ಆರೋಪ ಕೇಳಿ ಬಂದಿದೆ. ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನೆಲೆ ಫ್ಯಾಕ್ಟರಿ ಬಂದ್​ಗೆ ಆದೇಶ ನೀಡಲಾಗಿದೆ.

ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ.

ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಹುಮ್ನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈಧಿವೇಟ್‌ ಲಿಮಿಟೆಡ್‌ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.

 

 

Exit mobile version