Site icon PowerTV

ಇಂದು 78 ಕೇಂದ್ರಗಳಲ್ಲಿ CAR, DAR ಕಾನ್ಸ್‌ಟೇಬಲ್‌ಗಳ ನೇಮಕಾತಿ ಪರೀಕ್ಷೆ!

ಬೆಂಗಳೂರು: ಇಂದು ರಾಜ್ಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆಯೂ  ಪುರುಷ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ ಪರೀಕ್ಷೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ 78ಪರೀಕ್ಷಾ ಕೇಂದ್ರಗಳಲ್ಲಿ 42740 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3064 ಹುದ್ದೆಗಳು ಖಾಲಿಯಿದ್ದು, ಸಿಎಆರ್, ಡಿಎಆರ್‌ ಕಾನ್ಸ್‌ಟೇಬಲ್‌ಗಳ ನೇಮಕಾತಿ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಸಾಲ ವಾಪಸ್ ಕೇಳಿದ್ದಕ್ಕೆ ಲಾಂಗ್​ ಮಚ್ಚಿನಿಂದ ಮಾರಣಾಂತಿಕ ಹಲ್ಲೆ!

ಬೆಳಗಾವಿ, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರಗಿ, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಿಂದ ಅಭ್ಯರ್ಥಿಗಳು ಬಂದಿದ್ದು, ಇನ್ನು ಪರೀಕ್ಷಾ ಅಕ್ರಮ ತಪ್ಪಿಸಲು ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.

Exit mobile version