Site icon PowerTV

ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ!

ಬೆಂಗಳೂರು ಗ್ರಾಮಾಂತರ ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ತಮ್ಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ, ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ನಿಗಧಿತ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 05 ರೊಳಗೆ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ರಾಷ್ಟ್ರಪತಿಯವರಿಗೆ ಏಕವಚನ: ಸಿಎಂ ಆಡು ಪದ ಬಳಸಿದ್ದಾರೆ ಅಷ್ಟೇ- ದಿನೇಶ್ ಗುಂಡೂರಾವ್

ಅರ್ಜಿ ಸಲ್ಲಿಸಲು ಅರ್ಹತೆಗಳು: 

ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version