Site icon PowerTV

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರು ವಿಧಾನ ಪರಿಷತ್​ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ.

ವಿಧಾನ ಪರಿಷತ್‌ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: ನೆಲದ ಪಾಲಾಯ್ತು ಕ್ವಿಂಟಾಲ್​ ಗಟ್ಟಲೆ ಚಿಕನ್ ಬಿರಿಯಾನಿ!

ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

Exit mobile version