Site icon PowerTV

ಭಾರತಕ್ಕೆ ದೊಡ್ಡ ಶಾಕ್.. 2ನೇ ಟೆಸ್ಟ್​ನಿಂದ ಜಡೇಜಾ, ರಾಹುಲ್ ಔಟ್

ಬೆಂಗಳೂರು : ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಭಾರತದ ಇಬ್ಬರು ಸ್ಟಾರ್ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಕೆ.ಎಲ್ ರಾಹುಲ್ ಹೊರಗುಳಿದಿದ್ದಾರೆ.

ಬಿಸಿಸಿಐ ಎಕ್ಸ್​ ​ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್​ನ 4ನೇ ದಿನದ ಆಟದಲ್ಲಿ ರವೀಂದ್ರ ಜಡೇಜಾ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಕೆ.ಎಲ್. ರಾಹುಲ್ ಬಲ ತೊಡೆಯ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು.

ಇಂಜುರಿ ಸಮಸ್ಯೆಯಿಂದ ಹೊರಗುಳಿದಿರುವ ಜಡೇಜಾ ಹಾಗೂ ರಾಹುಲ್ ಬದಲಿಗೆ ಮೂವರು ಆಟಗಾರರನ್ನು ಬಿಸಿಸಿಐ ಆಯ್ಕೆ ಮಾಡಿದೆ. ರಾಹುಲ್ ಬದಲಿಗೆ ಸರ್ಫರಾಜ್ ಖಾನ್, ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಮೊದಲ ಟೆಸ್ಟ್ ಆರಂಭಕ್ಕೂ ಮುನ್ನವೇ ತಂಡದಿಂದ ಹೊರಬಿದ್ದಿದ್ದ ವೇಗಿ ಅವೇಶ್ ಖಾನ್ ಬದಲಿಯಾಗಿ ಸೌರಭ್ ಕುಮಾರ್ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಇಂಗ್ಲೆಂಡ್ ಲಯನ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಸರ್ಫರಾಜ್ ಖಾನ್​ಗೆ ಕೊನೆಗೂ ಭಾರತ ತಂಡದಲ್ಲಿ ಅವಕಾಶ ಲಭಿಸಿದೆ.

Exit mobile version