Site icon PowerTV

Bigg Boss ಡೋನ್ ಪ್ರತಾಪ್ ಸೋಲು; ಅರ್ಧ ಗಡ್ಡ, ಮೀಸೆ ತೆಗೆದ ಯುವಕ!

ಕಡಬ: ಬಿಗ್ ಬಾಸ್ ಸೀಸನ್ 10ರಲ್ಲಿ ಡೋನ್ ಪ್ರತಾಪ್‌ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ಫುಲ್ ವೈರಲ್ ಆಗುತ್ತಿದೆ.

ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝನುಲ್ ಆಬಿದ್ ಬಿಗ್ ಬಾಸ್‌ನಲ್ಲಿ ಡೋನ್ ಪ್ರತಾಪ್ ಗೆದ್ದುಬರುತ್ತಾರೆ; ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿದ್ದರು.

ಇದೀಗ ಕಾರ್ತಿಕ್ ವಿನ್ನರ್ ಆಗಿದ್ದು, ಪ್ರತಾಪ್ ರನ್ನರ್ ಅಪ್‌ಗೆ ಸಮಾಧಾನ ಪಟ್ಟುಕೊಂಡಿದ್ದಾರೆ. ಫಲಿತಾಂಶ ಹೊರಬರುತ್ತಲೇ ಆಬಿದ್ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾರೆ.

 

Exit mobile version