Site icon PowerTV

BJP-JDS ಮೈತ್ರಿ ಮಾಡಿಕೊಂಡಿದ್ದರೂ, ಪುಟ್ಟಣ್ಣ ನೂರಕ್ಕೆ ನೂರು ಗೆಲ್ಲೋದು ಗ್ಯಾರೆಂಟಿ: ಸಿಎಂ

ಬೆಂಗಳೂರು: ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ ಅವರಿಂದ ನಾಮಪತ್ರ ಸಲ್ಲಿಕೆಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಕೇಸರಿ ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ, ನಮ್ಮ ನಂಬಿಕೆಯ ಹೆಗ್ಗುರುತು: JDS

ಪುಟ್ಟಣ್ಣ ವಿಧಾನಸಭಾ ಚುನಾವಣೆಗೆ ನಿಲ್ಲಲು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಜೀನಾಮೆ ಕೊಟ್ಟಿದ್ದ ಕ್ಷೇತ್ರವಿದು. ಉಪಚುನಾವಣೆಗೆ ಐದನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ. ಹಿಂದೆಯೂ ಬಿಜೆಪಿ, ಜೆಡಿಎಸ್ ಸ್ಪರ್ಧೆ ಮಾಡಿದ್ದರೂ ಆದರೂ ಬಿಜೆಪಿ, ಜೆಡಿಎಸ್ ನವರನ್ನು ಸೋಲಿಸಿ ಪುಟ್ಟಣ್ಣ ಗೆದ್ದಿದ್ದರು. ಸತತವಾಗಿ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಗೆಲ್ಲಬೇಕೆಂದರೆ ಶಿಕ್ಷಕರ ಬೆಂಬಲವನ್ನು ಪಡೆದಿದ್ದು, ಅವರ ಮನಸ್ಸನ್ನು ಗೆದ್ದಿದ್ದಾರೆ. ಹಾಗಾಗಿ ಅವರನ್ನು ಶಿಕ್ಷಕರು ಒಪ್ಪಿದ್ದಾರೆ ಎಂದರು.

Exit mobile version