Site icon PowerTV

ಡಿಕೆಶಿ ಅಕ್ರಮ ಆದಾಯಗಳಿಕೆ ಕೇಸ್​​: ಇಂದು ಹೈಕೋರ್ಟ್​​ ಅರ್ಜಿ ವಿಚಾರಣೆ

ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ​ದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣವನ್ನು ವಿಚಾರಣೆಯನ್ನು ಇಂದು ನಡೆಯಲಿದೆ.

ಆದಾಯ ಮೀರಿ ಅಕ್ರಮ ಆಸ್ತಿಗಳಿಗೆ ಪ್ರಕರಣವನ್ನು CBI ತನಿಖೆ ನಡೆಸಲು ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಸಮ್ಮತಿಯನ್ನು ಹಿಂಪಡೆದಿದೆ. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: JDS ಮಂಡ್ಯ ನೆಲದಲ್ಲಿ ಕೋಮು ಬೀಜ ಬಿತ್ತನೆ: ಸಚಿವ ಚೆಲುವರಾಯಸ್ವಾಮಿ

ಈ ಹಿನ್ನೆಲೆ ಇಂದು ನ್ಯಾ.ಕೆ.ಸೋಮಶೇಖರ್, ನ್ಯಾ. ಉಮೇಶ್ ಎಂ.ಅಡಿಗರ ಅವರಿರುವ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ. 2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಅಗತ್ಯವಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅಂದಿನ ಸರ್ಕಾರದ ಸಮ್ಮತಿ ಪಡೆದು ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

Exit mobile version