Site icon PowerTV

ಸಿದ್ದರಾಮಯ್ಯ ನಿಮ್ಮನ್ನು ಕುರ್ಚಿಯಿಂದ ಇಳಿಸುವ ದಿನ ದೂರವಿಲ್ಲ: ಆರ್​.ಅಶೋಕ್​

ಮಂಡ್ಯ: ಕೆರಗೋಡಿನಲ್ಲಿ ಧ್ವಜಸ್ತಂಭದಿಂದ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಠಕ್ಕರ್‌ ಕೊಟ್ಟಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಆರ್‌.ಅಶೋಕ್‌, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಮೇಲೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ರಾಷ್ಟ್ರ ಧ್ವಜದ ಮೇಲೆ ಎಲ್ಲಿಲ್ಲದ ಭಕ್ತಿ ಉಕ್ಕಿ ಹರಿಯುತ್ತಿದೆ. ತಮಗೆ ಹನುಮಧ್ವಜದ ಮೇಲಿನ ನಿಮ್ಮ ದ್ವೇಷವನ್ನ ಮರೆಮಾಚಲು ರಾಷ್ಟ್ರಧ್ವಜದ ಮುಖವಾಡ ಹಾಕಿಕೊಳ್ಳುವ ಅಗತ್ಯ ಏನಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಡಿಕೆಶಿ ಅಕ್ರಮ ಆದಾಯ ಗಳಿಕೆ ಕೇಸ್​​: ಇಂದು ಹೈಕೋರ್ಟ್​​ ಅರ್ಜಿ ವಿಚಾರಣೆ

ತಾವು ಹನುಮ ಧ್ವಜವನ್ನು ಇಳಿಸಿದ ರೀತಿಯಲ್ಲೇ ಹಿಂದೂಗಳು ತಮ್ಮನ್ನು ಕುರ್ಚಿಯಿಂದ ಇಳಿಸುವ ದಿನ ಬಹಳ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.

Exit mobile version