Site icon PowerTV

ಹುಬ್ಬಳ್ಳಿಯಲ್ಲಿ ಹರಿದ ನೆತ್ತರು.. ಅನೈತಿಕ ಸಂಬಂಧ ಹಿನ್ನೆಲೆ ಯುವಕನ ಹತ್ಯೆ

ಹುಬ್ಬಳ್ಳಿ : ಅನೈತಿಕ ಸಂಬಂಧ ಹಿನ್ನೆಲೆ ಹುಬ್ಬಳ್ಳಿಯಲ್ಲಿ ನೆತ್ತರು ಹರಿದಿದೆ. ಯುವಕನ ತಲೆ ಮೇಲೆ ಕಲ್ಲು ಹಾಕಿ ಭೀಕರವಾಗಿ ಹತ್ಯೆ ಮಾಡಿದ್ದಲ್ಲದೇ ಮೃತದೇಹವನ್ನು ಸುಟ್ಟು ಹಾಕಿದ್ದಾರೆ.

ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ವಿಜಯ ಬಸವ (25) ಎಂದು ಗುರುತಿಸಲಾಗಿದೆ. ಎಂಟಿಎಸ್ ಕಾಲೋನಿಯ ಪಾಳುಬಿದ್ದ ಜಾಗದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್, ಡಿಸಿಪಿ ರಾಜೀವ್ ಎಂ., ಎಸಿಪಿ ವಿಜಯಕುಮಾರ ವಿ.ಟಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮದ್ಯದ ಬಾಟಲಿ, ಕಲ್ಲುಗಳು ಪತ್ತೆ

ಮೃತದೇಹದ ಪಕ್ಕ ಮದ್ಯದ ಬಾಟಲಿ ಹಾಗೂ ರಕ್ತ ಅಂಟಿದ ಎರಡು ಕಲ್ಲುಗಳು ಪತ್ತೆಯಾಗಿವೆ. ಮುಖದ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದಿರುವ ಗುರುತುಗಳಿವೆ. ಸ್ನೇಹಿತ ರಾಘವೇಂದ್ರ ಅವರಿಗೆ ಕರೆ ಮಾಡಿ, ಏನೋ ಮಾತನಾಡಬೇಕು ಎಂದಿದ್ದರಂತೆ. ಯಾವ ಕಾರಣಕ್ಕೆ ಕೊಲೆಯಾಗಿದೆ? ಯಾರು ಮಾಡಿದ್ದು? ಎನ್ನುವ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version