Friday, August 29, 2025
HomeUncategorizedಬಿಜೆಪಿಗರು ನನ್ನ ಹೇಳಿಕೆ ತಿರುಚುವುದರಲ್ಲಿ ನಿಸ್ಸೀಮರು : ಡಿ.ಕೆ. ಸುರೇಶ್

ಬಿಜೆಪಿಗರು ನನ್ನ ಹೇಳಿಕೆ ತಿರುಚುವುದರಲ್ಲಿ ನಿಸ್ಸೀಮರು : ಡಿ.ಕೆ. ಸುರೇಶ್

ಬೆಂಗಳೂರು : ಬಿಜೆಪಿ ಪಕ್ಷದವರು ನನ್ನ ಹೇಳಿಕೆಯನ್ನು ತಿರುಚುವುದರಲ್ಲಿ ನಿಸ್ಸೀಮರು ಎಂದು ಸಂಸದ ಡಿ.ಕೆ. ಸುರೇಶ್ ಕುಟುಕಿದ್ದಾರೆ.

ದೇಶ ವಿಭಜನೆ ಹೇಳಿಕೆ ಬಳಿಕ ಟ್ವೀಟ್ ಮಾಡಿರುವ ಅವರು, ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಛೇಡಿಸಿದ್ದಾರೆ.

ನಮ್ಮ ರಾಜ್ಯ ಕೇಂದ್ರದ ಬೊಕ್ಕಸಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಅದಕ್ಕೆ ಪ್ರತಿಯಾಗಿ ನಾವು ಪಡೆದುಕೊಂಡ ಅನುದಾನ, ಯೋಜನೆಗಳ ವಿಚಾರದಲ್ಲಿ ಸಂಪೂರ್ಣ ಮಲತಾಯಿ ಧೋರಣೆ ನಮಗೆ ಸಿಕ್ಕಿದೆ. ಕರ್ನಾಟಕ ಭಾರತದಲ್ಲೇ ಇದೆ. ಇದನ್ನು ಒಕ್ಕೂಟ ಸರ್ಕಾರ ಮರೆಯಬಾರದು. ಇದಕ್ಕೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದರೆ ನಾವು ಪ್ರತ್ಯೇಕತಾವಾದಿಗಳು ಎಂದು ಕಿಡಿಕಾರಿದ್ದಾರೆ.

ಇವ್ರು ರಾತ್ರೋರಾತ್ರಿ ಸುಗ್ರೀವಾಜ್ಞೆ ತರುತ್ತಾರೆ

ಮೇಕೆದಾಟು ಇರಲಿ, ಮಹದಾಯಿ ಇರಲಿ, ಬರ ಪರಿಹಾರ ಇರಲಿ, ಕೇಂದ್ರ ಬಿಜೆಪಿ ಸರಕಾರ ನಮ್ಮ ಯಾವುದೇ ಸಮಸ್ಯೆಗಳಿಗೆ ಈವರೆಗೆ ಸ್ಪಂದಿಸಿಲ್ಲ. ನಮ್ಮ ನಾಡಿನ ಭಾಷೆ ಉಳಿಸಿಕೊಳ್ಳಲು ನಾಮಫಲಕಗಳನ್ನು ಕನ್ನಡದಲ್ಲಿ ಕಡ್ಡಾಯ ಮಾಡಿದರೆ, ಅದನ್ನು ಬದಲಾಯಿಸಲು ಸುಗ್ರೀವಾಜ್ಞೆಗಳನ್ನೂ ಇವರು ರಾತ್ರೋರಾತ್ರಿ ತರುತ್ತಾರೆ ಎಂದು ಜಾಡಿಸಿದ್ದಾರೆ.

ಪ್ರತ್ಯೇಕದ ಕೂಗು ಈಗಾಗಲೇ ಎಲ್ಲ ಕಡೆ ಬಂದಿದೆ

ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಈ ಅನ್ಯಾಯ ಹೀಗೆ ಮುಂದುವರಿದರೆ, ಪ್ರತ್ಯೇಕದ ಕೂಗು ಈಗಾಗಲೇ ಎಲ್ಲ ಕಡೆ ಬಂದಿದೆ ಎಂದು ನಾನು ಹೇಳಿದ್ದೇನೆ ಎಂದು ಡಿ.ಕೆ. ಸುರೇಶ್ ಸ್ಪಷ್ಟನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments