Site icon PowerTV

ಜನರು ಮೂರನೇ ಬಾರಿಯೂ ಬಿಜೆಪಿಗೆ ಅಧಿಕಾರ ನೀಡಲಿದ್ದಾರೆ : ನಿರ್ಮಲಾ ಸೀತಾರಾಮನ್

ನವದೆಹಲಿ : ದೇಶದ ಜನರು ಮೂರನೇ ಬಾರಿಯೂ ಬಿಜೆಪಿಗೆ ಅಧಿಕಾರ ನೀಡಲಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರುವಂತೆ ಆಶೀರ್ವದಿಸಲಿದ್ದಾರೆ ಎಂದು ಬಜೆಟ್ ಭಾಷಣದಲ್ಲಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಕಟ್ಟುನಿಟ್ಟಿನ ನೀತಿ ಮತ್ತು ಅಭಿವೃದ್ಧಿ ಕಾರ್ಯವನ್ನು ಜನರು ಪರಿಗಣಿಸಲಿದ್ದಾರೆ. ನವಭಾರತದಲ್ಲಿ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಉಜ್ವಲ ಭವಿಷ್ಯ ಇದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್

ನಮ್ಮ ಸರ್ಕಾರದ ಅತ್ಯದ್ಭುತ ಅಭಿವೃದ್ಧಿ ಕಾರ್ಯವನ್ನು ಪರಿಗಣಿಸಿ ಜನರು ಮತ್ತೊಮ್ಮೆ ನಮ್ಮನ್ನು ಆಶೀರ್ವದಿಸಲಿದ್ದಾರೆ ಎಂಬ ನಿರೀಕ್ಷೆ ನಮ್ಮದಾಗಿದೆ. ಇದು ಚುನಾವಣಾ ಪೂರ್ವದ ಮಧ್ಯಂತರ ಬಜೆಟ್ ಆಗಿದ್ದು, ಸರ್ಕಾರ ಜುಲೈನಲ್ಲಿ ವಿಕಾಸ್ ಭಾರತದ ದೃಷ್ಟಿಕೋನದಡಿ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಲಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Exit mobile version