Monday, August 25, 2025
Google search engine
HomeUncategorizedನಮಗೆ ಪ್ರತ್ಯೇಕ ರಾಷ್ಟ್ರ ಬೇಕು : ಸಂಸದ ಡಿಕೆ ಸುರೇಶ್‌ ಕೂಗು

ನಮಗೆ ಪ್ರತ್ಯೇಕ ರಾಷ್ಟ್ರ ಬೇಕು : ಸಂಸದ ಡಿಕೆ ಸುರೇಶ್‌ ಕೂಗು

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ.ಇಂದಿನ ಬಜೆಟ್‌ನಲ್ಲಿ ಹೊಸತೇನು ಇಲ್ಲ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್‌ ಅಸಮಾಧಾನ ಹೊರ ಹಾಕಿದ್ದಾರೆ.

 ಮಧ್ಯಂತರ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಎಂದರು.

ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ

ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು ಇವೆ

ಈ ಬಜೆಟ್‌ ನಲ್ಲಿ ನಾಮಫಲಕ ಮಾತ್ರ ಬದಲಾಯಿಸಲಾಗಿದೆ. ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಎಕನಾಮಿಕ್ ಸರ್ವೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು?. ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್‌ ಇದಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments