Site icon PowerTV

ಬಿಜೆಪಿಯವರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ: ಡಿ.ಕೆ. ಶಿವಕುಮಾರ್

ಕಲಬುರಗಿ: ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ. ಈ ವಿಚಾರದಲ್ಲಿ ಮೊದಲು ಆತ್ಮಾವಲೋಕನ ಮೊದಲು ಮಾಡಿಕೊಳ್ಳಲಿ ಎಂದರು. ಬಿಜೆಪಿಯವರು ಒಂದು ದಿನವೂ ಪ್ರಧಾನಿ ಭೇಟಿ ಮಾಡಿ, ರಾಜ್ಯದ ಹಿತದ ಬಗ್ಗೆ ಧ್ವನಿ ಎತ್ತಲಿಲ್ಲ. ಮೊದಲು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ. ಇದೇ ಕಾರಣಕ್ಕೆ ರಾಜ್ಯದ ಜನ ಅವರನ್ನು ಧಿಕ್ಕರಿಸಿದ್ದಾರೆ ಎಂದು ಚಾಟಿ ಬೀಸಿದ್ದಾರೆ.

ಬರಗಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡದಿರುವುದು, ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ ಅನುದಾನ ಬಿಡುಗಡೆ ಮಾಡದಿರುವುದರ ವಿರುದ್ಧ ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದರು.

Exit mobile version