Site icon PowerTV

ಎಲ್‌ಕೆ ಆಡ್ವಾಣಿ ಭಾರತ ರತ್ನ ಪ್ರಶಸ್ತಿ ಗೌರವ: ಶುಭಾಶಯ ಕೋರಿದ HDK!

ಬೆಂಗಳೂರು: ಎಲ್‌ಕೆ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಿರುವುದನ್ನು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಅವರು, ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಭಾರತರತ್ನ’ ಗೌರವಕ್ಕೆ ಪಾತ್ರರಾಗಿರುವ ಹಿರಿಯ ರಾಜಕಾರಣಿ, ಮುತ್ಸದ್ಧಿ, ಬಿಜೆಪಿ ಭೀಷ್ಮ ಹಾಗೂ ಮಾಜಿ ಉಪ ಪ್ರಧಾನಿಗಳಾದ ಶ್ರೀ ಎಲ್.ಕೆ.ಆಡ್ವಾಣಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಶುಭಾಶಯ ಸಲ್ಲಿಸುತ್ತೇನೆ ಎಂದಿದ್ದಾರೆ.

ಅತ್ಯುನ್ನತ ಗೌರವಕ್ಕೆ ಅರ್ಹ ವ್ಯಕ್ತಿಯನ್ನು ಗುರುತಿಸಿ ಪುರಸ್ಕಾರ ಘೋಷಿಸಿರುವ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ನನ್ನ ಅಭಿವಂದನೆಗಳು ಎಂದಿರುವ ಎಚ್‌ಡಿ ಕುಮಾರಸ್ವಾಮಿ, ಭಾರತೀಯ ರಾಜಕಾರಣದಲ್ಲಿ ನಿಷ್ಠೆ, ಬದ್ಧತೆ, ಸ್ನೇಹಶೀಲತೆ ಹಾಗೂ ಕಠಿಣ ಪರಿಶ್ರಮಕ್ಕೆ ಅನ್ವರ್ಥವಾದ ಶ್ರೀ ಆಡ್ವಾಣಿ ಅವರು ಎಲ್ಲರಿಗೂ ಪ್ರೇರಣೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Exit mobile version