Site icon PowerTV

ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ!

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧ ಮೊದಲ ಬಲಿಯಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಇವರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು ಇದೀಗ ಕೊನೆಯುಸಿರೆಳೆದಿದ್ದಾರೆ. ರೆಡ್ ಝೋನ್​ನಲ್ಲಿ ತಪಾಸಣೆ ಮಾಡಿದಾಗ ವೃದ್ಧನಲ್ಲಿ ಕೆಎಫ್​ಡಿ ಪತ್ತೆಯಾಗಿದೆ. ವೃದ್ಧನ ಸಾವಿನಿಂದ ಮಲೆನಾಡಿನ ಜನರಲ್ಲಿ ಆತಂಕ ಹೆಚ್ಚಿದೆ.

ಇದನ್ನೂ ಓದಿ: ಜಾತಿ ಕಾರಣಕ್ಕೆ ದೇಗುಲದ ಗರ್ಭಗುಡಿಗೆ ಬಿಟ್ಟಿರಲಿಲ್ಲ:ಕನಕ ಪೀಠ ಶ್ರೀ

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕಳೆದ 10 ದಿನಗಳಲ್ಲಿ ಬರೊಬ್ಬರಿ 21 ಜನರಿಗೆ ಸೋಂಕು ತಗುಲಿದ್ದು, ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ ಆತಂಕವೂ ಜನರಲ್ಲಿ ಮನೆ ಮಾಡಿದೆ. ಇನ್ನು ಈ ಸೋಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲವಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳುವುದೊಂದೇ ದಾರಿ ಮತ್ತು ಅತೀ ಅವಶ್ಯಕ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದ್ದು  ಜಿಲ್ಲಾಡಳಿತ ಕಾಯಿಲೆ  ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಪರದಾಡುತ್ತಿದೆ. ಅದರಲ್ಲೂ ಚಳಿಗಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರಿಗೆ ಮಂಗನ ಕಾಯಿಲೆ ಆತಂಕ ಕಾಡುತ್ತಿದೆ.

Exit mobile version