Site icon PowerTV

ರಸ್ತೆ ದಾಟುವಾಗ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

ಬೀದರ್: ಡಿವೈಡರ್ ದಾಟುವ ವೇಳೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಬಳಿ ಸಂಭವಿಸಿದೆ.

ಸಾಯಿನೇತಾ ದುಮಾಳ (17), ಹಾಗೂ ಈರಣ್ಣ ಹಾರ್ಕೂಡೆ (32). ಮೃತ ದುರ್ದೈವಿಗಳು. ದ್ವಿಚಕ್ರ ವಾಹನದಲ್ಲಿ ರಸ್ತೆ ನಿಯಮ ಉಲ್ಲಂಘಿಸಿ ರಸ್ತೆ ದಾಟುವಾಗ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಹಾರಿ ಬಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರು ಗಂಭೀರ ಗಾಯಗಳಿಂದ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 10ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ!

ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧ ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ‌ ಪ್ರಕರರಣ ದಾಖಲಾಗಿದೆ.

Exit mobile version