Site icon PowerTV

ಹಾಸನ, ಮಂಡ್ಯ ಲೋಕಸಭಾ ಟಿಕೆಟ್ ಬಿಜೆಪಿಗೆ ಸಿಗಲಿದೆ: ಪ್ರೀತಮ್ ಗೌಡ

ಮಂಡ್ಯ: ಲೋಕಸಭಾ ಚುನಾವಣೆಗೆ ಹಾಸನ ಹಾಗೂ ಮಂಡ್ಯ ಎರಡು ಕ್ಷೇತ್ರಗಳು ಬಿಜೆಪಿಗೆ ಸಿಗಲಿವೆ. ಈ ಮೂಲಕ ಪ್ರತಿ ಗ್ರಾಮದಲ್ಲೂ ಬಿಜೆಪಿ ಪಕ್ಷ ಕಟ್ಟೋಣ. ಒಂದು ವೇಳೆ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟು ಕೊಟ್ಟರೆ, ಅಭ್ಯರ್ಥಿ ಆಯ್ಕೆಗೆ ನಮ್ಮ ಕಾರ್ಯಕರ್ತರ ಒಪ್ಪಿಗೆ ತೆಗೆದುಕೊಳ್ಳಬೇಕು ಎಂದು ಮಾಜಿ ಶಾಸಕ ಪ್ರೀತಮ್‍ ಗೌಡ ಹೇಳಿದ್ದಾರೆ.

ಪಾಂಡವಪುರದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಗೌಡರಿಗೆ ಮಂಡ್ಯದಲ್ಲೂ ನೆಂಟರಿದ್ದಾರೆ, ಹಾಸನದಲ್ಲೂ ನೆಂಟರು ಇರ್ತಾರೆ. ನಮ್ಮ ಸಂಕಲ್ಪ ಕುಟುಂಬ ರಾಜಕೀಯದ ವಿರುದ್ಧ ಇರಬೇಕು. ನೆಂಟಸ್ಥಿಕೆ ಎಲ್ಲವನ್ನೂ ಬಿಡಬೇಕು ಎಂದರು.

ಇದನ್ನು ಓದಿ: ಪುತ್ರನ ಸ್ಪರ್ಧೆಗೆ ಸಿದ್ದರಾಮಯ್ಯ ಸಮೀಕ್ಷೆ!

ರಾಷ್ಟ್ರ, ರಾಜ್ಯ ಸೇರಿದಂತೆ ಮಂಡ್ಯದಲ್ಲೂ ಕುಟುಂಬ ರಾಜಕೀಯ ಇದೆ. ಎಲ್ಲಾ ರಾಜ್ಯದಲ್ಲೂ ಒಂದೊಂದು ಕುಟುಂಬ ರಾಜಕೀಯ ಇದೆ. ಇನ್ನು ರಾಜ್ಯದ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುವುದೇ ಬೇಡ. ಅವರು ಆಯ್ತು, ಮಕ್ಕಳು ಆಯ್ತು, ಮೊಮ್ಮಕ್ಕಳು ಆಯ್ತು, ಈಗ ಮರಿ ಮಕ್ಕಳು ಎಂದು ಅವರು ವ್ಯಂಗ್ಯವಾಡಿದ್ದಾರೆ.

Exit mobile version