Site icon PowerTV

ಶಾಲೆಗೆ ಬಾಂಬ್ ಬೆದರಿಕೆ ; ದೂರು ದಾಖಲು!

ಬೆಂಗಳೂರು: Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇ-ಮೇಲ್ ಮೂಲಕ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ!

ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ. ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಆಗಂತಕರು ಮೇಲ್ ಮಾಡಿ ಬೆದರಿಸಿದ್ದಾರೆ. ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಅಲರ್ಟ್ ಆಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ.

ಸದ್ಯ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Exit mobile version