Site icon PowerTV

ಪುತ್ರನ ಸ್ಪರ್ಧೆಗೆ ಸಿದ್ದರಾಮಯ್ಯ ಸಮೀಕ್ಷೆ!

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆ ರಂಗೇರಿದೆ. ಈ ಸಂಬಂಧ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಕಾಂಗ್ರೆಸ್ ಕೆಲ ಕ್ಷೇತ್ರಗಳ​ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದೆ. ಅದರಲ್ಲೂ ಮುಖ್ಯವಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಯತೀಶ್​ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ: ರಸ್ತೆ ದಾಟುವಾಗ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

ಹೀಗಾಗಿ ಯತೀಂದ್ರ ಸ್ಪರ್ಧಿಸಿದರೆ ಹೇಗೆ ಎನ್ನುವ ಬಗ್ಗೆ ಸಿದ್ದರಾಮಯ್ಯ ಅವರು ಜಿಲ್ಲೆಯ ಶಾಸಕ ಹಾಗೂ ಮಾಜಿ ಶಾಸಕರ ಬಳಿ ಅಭಿಪ್ರಾಯ ಕೇಳಿದ್ದಾರೆ. ಅಲ್ಲದೇ ಪ್ರತಿ ಕ್ಷೇತ್ರದ ಜಾತಿವಾರು ಅಂಕಿ ಅಂಶ ಸಮೇತ ಮಾಹಿತಿ ಕೊಡುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೊನ್ನೆ ಮೈಸೂರು-ಕೊಡಗು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಶಾಸಕ ಹಾಗೂ ಮಾಜಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದರು. ಅದೇ ವೇಳೆ ಪ್ರತಿ ಕ್ಷೇತ್ರದ ಜಾತಿವಾರು ಸಮೇತ ಮಾಹಿತಿ ಕೇಳಿದ್ದಾರಂತೆ.

ತಮ್ಮ ಮಗನ ಸ್ಪರ್ಧೆ ಬಗ್ಗೆ ಕ್ಷೇತ್ರದ ಜಿಲ್ಲಾ ಉಸ್ತುವಾರಿ ಸಚಿವರನ್ನ ಕೂರಿಸಿಕೊಂಡು ಒಬ್ಬೊಬ್ಬ ಮಾಜಿ ಹಾಗೂ ಹಾಲಿ ಶಾಸಕರ ಬಳಿ ಸಿದ್ದರಾಮಯ್ಯನವರು ಮುಕ್ತ ಅಭಿಪ್ರಾಯ ಕೇಳಿದ್ದು, ಯತೀಂದ್ರ ಸ್ಪರ್ಧೆಗೆ ಈ ಸಂದರ್ಭ ಸರಿ ಇಲ್ಲ ಎಂಬ ಅಭಿಪ್ರಾಯವನ್ನು ಮೂವರು ಶಾಸಕರು ಹಾಗೂ ಓರ್ವ ಮಾಜಿ ಶಾಸಕ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Exit mobile version