Site icon PowerTV

ಫೆ.8ಕ್ಕೆ ದೆಹಲಿಯಲ್ಲಿ ತಮಿಳುನಾಡು ಡಿಎಂಕೆ ಪಕ್ಷ ಪ್ರತಿಭಟನೆ!

ತಮಿಳುನಾಡು: ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ಇದೇ ಫೆ.7 ರಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ ಬೆನ್ನಲ್ಲೇ, ತಮಿಳುನಾಡು ಆಡಳಿತರೂಢ ಡಿಎಂಕೆ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು ಫೆ.8ರಂದು ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2024-25ರ ಮಧ್ಯಂತರ ಬಜೆಟ್​ನಲ್ಲಿ ರಾಜ್ಯಕ್ಕೆ ಯಾವುದೇ ಅಗತ್ಯ ಅನುದಾನವನ್ನು ಹಂಚಿಕೆ ಮಾಡದೆ ಅನ್ಯಾಯ ಮಾಡಲಾಗಿದೆ ಎಂದು ಡಿಎಂಕೆ ಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ರಾಜ್ಯಕ್ಕೆ ಏನ್ ಕೊಟ್ಟಿದೆ?: ಡಿಕೆ ಶಿವಕುಮಾರ್ ಪ್ರಶ್ನೆ!

ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ, ಚಂಡಮಾರುತದಿಂದ ರಾಜ್ಯಕ್ಕೆ ಆಗಿರುವ ಹಾನಿಯನ್ನು ನಿಭಾಯಿಸಲು ಅಗತ್ಯವಿರುವಷ್ಟು ಅನುದಾನ ನೀಡದೇ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಕೇಂದ್ರದ ಧೋರಣೆ ಖಂಡಿಸಿ ಫೆ.8 ರಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ, ಅಗತ್ಯ ಬಿದ್ದರೇ ಈ ಪ್ರತಿಭಟನೆಯಲ್ಲಿ ಪಾಲ್ಗೋಳ್ಳುವಂತೆ ಕಾಂಗ್ರೆಸ್​ ಸೇರಿದಂತೆ ಮೈತ್ರಿ ಪಕ್ಷಗಳಿಗೆ ಕೋರಲಾಗುವುದು ಎಂದು ಡಿಎಂಕೆ ಪಕ್ಷದ ಸಂಸದೀಯ ನಾಯಕ ಟಿ.ಆರ್​ ಬಾಲು ತಿಳಿಸಿದ್ದಾರೆ.

Exit mobile version