Site icon PowerTV

‘ಸ್ಲೀಪಿಂಗ್ ಸರ್ಕಾರ’ 9 ತಿಂಗಳಿಂದಲೂ ನಿದ್ದೆ ಮಾಡುತ್ತಲೇ ಇದೆ : ಬಿಜೆಪಿ

ಬೆಂಗಳೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ 1.37 ಲಕ್ಷಕ್ಕೂ ಹೆಚ್ಚು ಕಡತಗಳ ವಿಲೇವಾರಿ ಬಾಕಿ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ನಡುವೆ ಟ್ವೀಟ್​ ಸಮರ ನಡೆದಿದೆ.

ಇದು ನೀವು ಬಿಟ್ಟು ಹೋದ ಬಳುವಳಿ ಎಂದು ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ‘ಸ್ಲೀಪಿಂಗ್‌ ಸರ್ಕಾರ’ ಎಂದು ಸಿಎಂಗೆ ತಿರುಗೇಟು ಕೊಟ್ಟಿದೆ.

ಸಿದ್ದರಾಮಯ್ಯ ಅವರ ಸ್ಲೀಪಿಂಗ್‌ ಸರ್ಕಾರ ಕಳೆದ 9 ತಿಂಗಳಿಂದಲೂ ನಿದ್ದೆ ಮಾಡುತ್ತಲೇ ಇದೆ. ಎಚ್ಚರಿಸುವ ಕೆಲಸ ಮಾಡಿದರೆ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸಾಗುತ್ತದೆ. ಸ್ವಾಮಿ ಸಿದ್ದರಾಮಯ್ಯರವರೇ, ನಿಮ್ಮ ಸಾಧನೆ ಏನು ಹೇಳಿ ಎಂದು ಜನತೆ ಕೇಳಿದರೆ, ನಿಮ್ಮ ಬಳಿ ಉತ್ತರವಿಲ್ಲ ಎಂದು ಕುಟುಕಿದೆ.

ರಾಜೀನಾಮೆ ಕೊಟ್ಟು ಮನೆಗೆ ಹೊರಡಿ

ಬೇರೆಯವರ ಮೇಲೆ ಗೂಬೆ ಕೂರಿಸಲು ನೀವು ಕೊಡುವ ಸಮಯವನ್ನೇನಾದರೂ ರಾಜ್ಯದ ಅಭಿವೃದ್ಧಿಗೆ ಕೊಟ್ಟಿದ್ದರೆ, ಬಹುಶಃ ಇಂದು ನೀವು ಈ ರೀತಿ ಬೊಗಳೆ ಬಿಡುವ ಪರಿಸ್ಥಿತಿ ಬರುತ್ತಿರಲಿಲ್ಲ. ನಿಮ್ಮಿಂದ ಆಡಳಿತ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೊರಡಿ. ನಿಮ್ಮ ದುರಾಡಳಿತದಿಂದಾಗಿ ಕರ್ನಾಟಕದ ಜನ ರೋಸಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

Exit mobile version