Site icon PowerTV

ಚಿಕ್ಕಬಳ್ಳಾಪುರದಿಂದ ಸ್ಪರ್ಧೆಗೆ JDS ಗ್ರೀನ್ ಸಿಗ್ನಲ್ : ಕೆ.ಸುಧಾಕರ್​

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ತಮಗೆ ಬಿಜೆಪಿ ನಾಯಕರು ಟಿಕೆಟ್ ನೀಡುವ ವಿಶ್ವಾಸವಿದೆ. ಹಾಗೆಯೇ ಕುಮಾರಸ್ವಾಮಿ ಹಾಗೂ ಹೆಚ್. ಡಿ. ದೇವೇಗೌಡರು ಸಹ ಹಸಿರು ನಿಶಾನೆ ತೋರಿದ್ದು ಕೆಲಸ ಪ್ರಾರಂಭ ಮಾಡಲು ತಿಳಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಪವರ್​ ಟಿವಿ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ: ಸಂಪಾದಕರಾದ ಮನೋಜ್ ಕುಮಾರ್​ಗೆ ಪ್ರಶಸ್ತಿ

ನಿಮಗೆಲ್ಲಾ ಸುಧಾಕರ್ ಅಂದ್ರೆ ಅಭಿವೃದ್ಧಿ ಅಭಿವೃದ್ಧಿ ಅಂದ್ರೆ ಸುಧಾಕರ್ ಎನ್ನುವುದು ಗೊತ್ತಿದೆ. ನಾನು ಸಂಸದನಾದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದೇನೆ. ಕೃಷಿ, ನೀರಾವರಿ, ಕೈಗಾರಿಕೆಗಳ ಸ್ಥಾಪನೆ, ಯುವಕರಿಗೆ ಉದ್ಯೋಗ ಕೊಡಿಸವ ಮೂಲಕ ಅಭಿವೃದ್ಧಿ ಏನು ಅಂತ ತೋರಿಸಲಿದ್ದೇನೆ ಎಂದು ಹೇಳಿದ್ದಾರೆ.

Exit mobile version