Site icon PowerTV

ಹನುಮ ಧ್ವಜ ವಿವಾದ: ನಾಳೆ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ಮಂಡ್ಯ ಬಂದ್​​​ ವಾಪಸ್

ಮಂಡ್ಯ: ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ನಾಳೆ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ಮಂಡ್ಯ ಬಂದ್​​​ನ್ನು ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ​ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಫೆ.9ಕ್ಕೆ ಭಜರಂಗದಳ ಬಂದ್ ಗೆ ಕರೆ ಕೊಟ್ಟಿದೆ. ಮತ್ತೊಂದೆಡೆ ಭಜರಂಗದಳ ಬಂದ್ ಕರೆ ವಿರೋಧಿಸಿ ಫೆ.7 ಕ್ಕೆ ಸಮಾನ ಮನಸ್ಕರ ವೇದಿಕೆ ಬಂದ್​ಗೆ ಕರೆ ಕೊಟ್ಟಿತ್ತು. ಸಮಾನ ಮನಸ್ಕರ ವೇದಿಕೆಗೆ ದಲಿತ ಪರ ಸಂಘಟನೆ, ಪ್ರಗತಿಪರರು, ಸಿಐಟಿಯು ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರು. ಆದರೆ ಇದೀಗ ಜಿಲ್ಲಾಡಳಿತ ಮನವಿ ಮೇರೆಗೆ ಸಮಾನ ಮನಸ್ಕರ ವೇದಿಕೆ ಬಂದ್ ಹಿಂಪಡೆದಿದೆ.

ಮಂಡ್ಯ ಡಿಸಿ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ನೇತೃತ್ವದಲ್ಲಿ ಸಭೆ ನಡೆಸಿ, ಬಂದ್ ನಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತೆ. ಅಂಗಡಿ ಮುಂಗಟ್ಟುಗಳ ವ್ಯಾಪಾರಕ್ಕೂ, ಜನ ಸಾಮಾನ್ಯರಿಗೆ ತೊಂದರೆಯಾಗುತ್ತೆ. ಹೀಗಾಗಿ ಸಂಘಟನೆಗಳು ಬಂದ್ ಹಿಂಪಡೆಯಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲಾಡಳಿತದ ಮನವಿಗೆ ಸಮಾನ ಮನಸ್ಕರ ವೇದಿಕೆ ಸ್ಪಂದಿಸಿದ್ದು ಬಂದ್ ಹಿಂಪಡೆದಿದೆ.

Exit mobile version