Site icon PowerTV

ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ : ಫೆ.11 ರವರೆಗೆ ನಿತ್ಯ ಕಾರ್ಯಕ್ರಮ

ಮೈಸೂರು : 6 ದಿನಗಳ ಕಾಲ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ನೇತೃತ್ವದಲ್ಲಿ ನಡೆಯುವ ಇತಿಹಾಸ ಪ್ರಸಿದ್ದ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದಲ್ಲಿ ಫೆಬ್ರವರಿ 6 ರಿಂದ ಫೆ.11 ರವರೆಗೆ 6 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಪ್ರತಿದಿನವೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾಮೂಹಿಕ ವಿವಾಹ, ರಥೋತ್ಸವ, ಗ್ರಾಮೀಣ ಕ್ರೀಡೆಗಳು, ಕೃಷಿ ಮೇಳ, ಲಕ್ಷ ದೀಪೋತ್ಸವ ಹಾಗೂ ತೆಪ್ಪೋತ್ಸವ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿದೆ. ಇದೇ ವೇಳೆ ಸಚಿವರು, ‘ಜಾತ್ರಾ ಮಹೋತ್ಸವದ ವಸ್ತುಪ್ರದರ್ಶ‌ನ, ಕೃಷಿಮೇಳ, ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.

ಇನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಜಾತ್ರೆಗೆ ಸುಮಾರು 25 ಲಕ್ಷ ಜನರು ಬರುವ ನಿರೀಕ್ಷೆಯಿದೆ. ಜೊತೆಗೆ ಬರುವಂತ ಭಕ್ತರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

Exit mobile version