Site icon PowerTV

ಹಳೆ ವೈಷಮ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ:ತಡರಾತ್ರಿ ಮಾರಕಾಸ್ತ್ರಗಳಿಂದ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ನಡೆದಿದೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ರೋಹನ್ ವಾಕಡೆ (22) ಹತ್ಯೆಯಾಗಿರುವ ಯುವಕ. ಯಾವುದೋ ಹಳೆಯ ವಿಷಯಕ್ಕೆ ದುಷ್ಕರ್ಮಿಗಳು ಯುವಕನ ಜೊತೆ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಗಲಾಟೆ ತೆಗೆದುಕೊಂಡಿದ್ದಾರೆ. ಬಳಿಕ ತಮ್ಮ ಬಳಿ ಇದ್ದಂತಹ ಮಾರಕಾಸ್ತ್ರಗಳಿಂದ ಬರ್ಬರವಾಗಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಬಳಿಕ ಘಟನಾ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Exit mobile version