Site icon PowerTV

ಬೆಳಗಾವಿಯ ಕಾಂಗ್ರೆಸ್‌ ಕಚೇರಿಗೆ ನುಗ್ಗಿ ಬಿಜೆಪಿಗರು ದಾಂಧಲೆ

ಬೆಳಗಾವಿ: ಹಾಲಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲವೆಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹಾಲು ಉತ್ಪಾದಕರ ಪ್ರೋತ್ಸಾಹ ಧನ ನೀಡಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೂ ಕತ್ತರಿ ಹಾಕಲಾಗಿದೆ.ಶ್ರೀಘ್ರವೇ ಪೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಳಗಾವಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಸಂಸದ ಡಿ.ಕೆ ಸುರೇಶ್‌ ವಿರುದ್ಧವೂ ಘೋಷಣೆ ಕೂಗಿದ್ದಾರೆ.

ಬಿಜೆಪಿಗರನ್ನು ತಡೆಯಲು ಬಂದ ಪೊಲೀಸರೊಂದಿಗೆ ನೂಕಾಟ ನಡೆಸಿದ್ದಾರೆ. ಕಾಂಗ್ರೆಸ್‌ ಕಚೇರಿಗೆ ನುಗ್ಗಿದ್ದ ಬಿಜೆಪಿಗರನ್ನು ಪೊಲೀಸರು ಹೊರಕ್ಕೆ ಎಳೆತಂದಿದ್ದಾರೆ. ಸುಮಾರು 30 ಮಂದಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Exit mobile version