Site icon PowerTV

ವ್ಹೀಲಿಂಗ್ ಮಾಡಬೇಡ ಎಂದಿದ್ದಕ್ಕೆ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಶಿವಮೊಗ್ಗ: ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಶಿಕಾರಿಪುರದಲ್ಲಿ ಯುವಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ದೊಡ್ಡಪೇಟೆ ಮುಖ್ಯರಸ್ತೆಯ ವಿಠ್ಠಲ ದೇವಸ್ಥಾನದ ಬಳಿ ರಾತ್ರಿ 9:15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕಳೆದ ಕೆಲವು ತಿಂಗಳಿಂದ ನಿರಂತರವಾಗಿ ಬೈಕ್ ವ್ಹೀಲಿಂಗ್ ಮಾಡಿ ಸಾರ್ವಜನಿಕರಿಗೆ ಅನ್ಯಕೋಮಿನ ಯುವಕ ತೊಂದರೆ ಕೊಡ್ತಿದ್ದ. ನಿನ್ನೆ ಮತ್ತೆ ವ್ಹೀಲಿಂಗ್ ಮಾಡ್ತಿದ್ದಾರೆ ಸುಶೀಲ್ ಯುವಕನಿಗೆ ಬುದ್ಧಿವಾದ ಹೇಳಿದ್ದ. ಆಗ ಸುಶೀಲ್‌ಗೆ ಯುವಕ ಅವಾಜ್ ಹಾಕಿ ಹೋಗಿದ್ದ. ನಂತರ ತನ್ನ ಸ್ನೇಹಿತರೊಂದಿಗೆ ಬಂದು ಸುಶೀಲ್ ಹೊಟ್ಟೆ ಹಾಗೂ ಎದೆ ಭಾಗಕ್ಕೆ ಚುಚ್ಚಿ ಪರಾರಿಯಾಗಿದ್ದಾರೆ.

ಇನ್ನು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಗಾಯಾಳುವಿಗೆ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಘಟನೆಯನ್ನ ಹಿಂದೂ ಸಂಘಟನೆ ಖಂಡಿಸಿದ್ದು, ತಪ್ಪಿತಸ್ತರ ವಿರುದ್ಧ ಕ್ರಮಗೊಳ್ಳುವಂತೆ ಆಗ್ರಹಿಸಿದೆ.

ಸದ್ಯ ಕೇಸ್​ ಸಂಬಂಧ ಪೊಲೀಸ್ರು ಅನುಮಾನದ ಮೇರೆಗೆ ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ಬಿ.ವೈ.ರಾಘವೇಂದ್ರ ಗಾಯಾಳು ಆರೋಗ್ಯ ವಿಚಾರಣೆ ಮಾಡಿದ್ದಾರೆ.

Exit mobile version