Site icon PowerTV

ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ಮತ ನೀಡಿದಂತೆ: ಮಾಜಿ ಸ್ಪೀಕರ್​ ಕಾಗೇರಿ 

ಕಾರವಾರ: ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಲೋಕಸಭಾ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಚುನಾವಣೆ ಆರಂಭಕ್ಕೂ ಮುನ್ನ ರಾಮನ ಹೆಸರಿನಲ್ಲಿ ಪ್ರಚಾರ ಆರಂಭಿಸಿದ್ದಾರೆ.

ಶಿರಶಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನೀವು ಮತ ಹಾಕಿದರೆ ಅದು ರಾಮನಿಗೆ ಹಾಗೂ ಪ್ರಧಾನಿ ಮೋದಿಗೆ ಮತ ಹಾಕಿದಂತೆ ಜತೆಗೆ, ದೇಶದ ಐಕ್ಯತೆಗೆ ಮತ ನೀಡಿದಂತೆ. ಈ ಸಂದೇಶವನ್ನು ಜನರಿಗೆ ತಲುಪಿಸೋಣ, ಅವರಲ್ಲಿ ಜಾಗೃತಿ ಮೂಡಿಸೋಣ. ಎಲ್ಲರೂ ಮತದಾನ ಮಾಡುವಂತೆ ನಾವು ಮಾಡೋಣ ಎಂದು ಕಾರ್ಯರ್ತರು ಹಾಗೂ ಮುಖಂಡರಿಗೆ ಮನವಿ ಮಾಡಿದ್ದಾರೆ.

ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಮಲದ ಹೂ. ವ್ಯಕ್ತಿ ಯಾರು ಎಂಬುದನ್ನು ವರಿಷ್ಠರು ಸೂಕ್ತ ಸಮಯದಲ್ಲಿ ಘೋಷಣೆ ಮಾಡುತ್ತಾರೆ. ಕಳೆದ ಬಾರಿಗಿಂತಲೂ ದಾಖಲೆ ಮತಗಳಿಂದ ಈ ಬಾರಿ ನಮ್ಮ ಬಿಜೆಪಿ ಗೆಲ್ಲಲಿದೆ. ಕಳೆದ ಬಾರಿ 4 ಲಕ್ಷ 80 ಸಾವಿರ ಮತಗಳ ಅಂತರದಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಆ ದಾಖಲೆಯನ್ನು ಮುರಿದು ಇನ್ನೊಂದು ದಾಖಲೆಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅವರು ಹೇಳಿದ್ದಾರೆ.

Exit mobile version