Site icon PowerTV

ಕಾಂಗ್ರೆಸ್ ಸರ್ಕಾರದಲ್ಲಿ 40% ಕಮಿಷನ್ ನಡೆಯುತ್ತಿದೆ : ಕೆಂಪಣ್ಣ ಆರೋಪ

ಬೆಂಗಳೂರು : ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಈ ಹಿಂದೆ ಶಾಸಕರೇ ನೇರವಾಗಿ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳಿಂದಲೇ ಭ್ರಷ್ಟಾಚಾರ ರಾಜ್ಯದಲ್ಲಿ ಬೇರೂರಿದೆ. ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಅಧಿಕಾರಿಯಾಗಳಿದ್ದಾರೆ ಎಂದು ದೂರಿದರು.

ಬಿಬಿಎಂಪಿಯಲ್ಲಿ 15 ಮಂದಿ ಅಧಿಕಾರಿಗಳು ಭ್ರಷ್ಟರಿದ್ದಾರೆ. ಅಧಿಕಾರಿಗಳದ್ದೇ ಕಾರುಬಾರು ಆಗಿ ಹೋಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ಮದರಸ, ಹಲಾಲ್, ಷರಿಯಾ ನಿಷೇಧ ಮಾಡಬೇಕು : ಶಾಸಕ ಯತ್ನಾಳ್

ಅಶೋಕ್ ಅವರನ್ನು ಭೇಟಿ ಮಾಡಲಾಗುವುದು

ಮಾರ್ಚ್ 4 ರಂದು ಅರಮನೆ ಮೈದಾನದಲ್ಲಿ ಕಾಂಟ್ರಾಕ್ಟರ್ ಅಸೋಸಿಯೇಷನ್ ಸಮ್ಮೇಳನ ನಡೆಸಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಲಾಗುವುದು. ಅಧಿಕಾರಿಗಳ ಭ್ರಷ್ಟಾಚಾರ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಭೇಟಿ ಮಾಡಲಾಗುವುದು ಎಂದು ಕೆಂಪಣ್ಣ ತಿಳಿಸಿದರು.

Exit mobile version