Site icon PowerTV

ಪರಶುರಾಮ ಥೀಮ್ ಪಾರ್ಕ್ ಅಕ್ರಮ ಸಿಐಡಿ ತನಿಖೆಗೆ : ಸಿಎಂ ಆದೇಶ

ಉಡುಪಿ : ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿಗೆ ಒಪ್ಪಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಇದೇ 2ರಂದು ಲಕ್ಷ್ಮಿ ‌ ಹೆಬ್ಬಾಳ್ಕರ್ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರ

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ  ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರಿ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

Exit mobile version