Site icon PowerTV

ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಭಾಗಿ!

ದಾವಣಗೆರೆ: ಜಿಲ್ಲೆಯ ಹರಿಹರದ ರಾಜನಹಳ್ಳಿ ವಾಲ್ಮೀಕಿ ಪೀಠದ ಆವರಣದಲ್ಲಿ ನಡೆಯಲಿರುವ 6ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಮೊದಲು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಪೀಠದ ಕಾರ್ಯಕ್ರಮ ಭಾಗಿಯಾದ ಬಳಿಕ ದಾವಣಗೆರೆ ರಾಜನಹಳ್ಳಿಯ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗುತ್ತಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಸತೀಶ್ ಜಾರಕಿಹೊಳಿ, ಜಿ. ಪರಮೇಶ್ವರ್, ಜಾತ್ರಾ ಸಮಿತಿ ಅಧ್ಯಕ್ಷರಾದ ಕೆ. ಎನ್ ರಾಜಣ್ಣ ಸೇರಿದಂತೆ, ಹಲವು ರಾಜಕೀಯ ನಾಯಕರು ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ: ಮಂಡ್ಯ ಬಂದ್​ : ಶಾಸಕ ರವಿ ಗಣಿಗ ಮನೆಯ ಸುತ್ತ ಬಿಗಿ ಬಂದೋಬಸ್ತ್​!

ಇನ್ನು ವಿಪಕ್ಷ ನಾಯಕ ಆರ್. ಅಶೋಕ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜನ ಜಾಗೃತಿ ಜಾತ್ರಾ ಮಹೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿ, ಸಂಜೆ 4 ಗಂಟೆಗೆ ಬೆಂಗಳೂರಿನತ್ತ ಹೆಲಿಕಾಫ್ಟರ್ ಮೂಲಕ ವಾಪಸ್​ ಆಗಲಿದ್ದಾರೆ.

Exit mobile version