Site icon PowerTV

ಇಂದು ಮಂಡ್ಯ ಬಂದ್; ಕೆರಗೋಡಿನಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಬೈಕ್ ರ್ಯಾಲಿ

ಮಂಡ್ಯ: ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಮಂಡ್ಯ ಬಂದ್‌‌ಗೆ ಕರೆ ನೀಡಿವೆ. ಕೆರಗೋಡು ಗ್ರಾಮದದಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್‌ ಬೈಕ್‌ ರ್ಯಾಲಿ ನಡೆಯಲಿದೆ.

ಈ ಬಂದ್‌ಗೆ ಜೆಡಿಎಸ್, ಬಿಜೆಪಿ ನೇರ ಬೆಂಬಲ ಇಲ್ಲ ಅಂತ ಬಿಜೆಪಿ ಮುಖಂಡ ಅಶೋಕ್ ಜಯರಾಂ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಬಂದ್‌ಗೆ ಬಿಜೆಪಿ, ಜೆಡಿಎಸ್ ಬೆಂಬಲ ನೀಡ್ತಿಲ್ಲ ಎಂದಿದ್ದಾರೆ.

ಕೆರಗೋಡಿನಿಂದ ಬೈಕ್ ರ್ಯಾಲಿ

ಬಂದ್​ಗೆ ಬೆಂಬಲ ನೀಡುವ ಕುರಿತು ಮಾತನಾಡಿದ್ದ ಮಂಡ್ಯ ಬಿಜೆಪಿ ಮುಖಂಡ ಜಯರಾಂ, ಬಂದ್​​ಗೆ ಬಿಜೆಪಿ, ಜೆಡಿಎಸ್ ಪಕ್ಷಗಳು ಬೆಂಬಲ ನೀಡುತ್ತಿಲ್ಲ. ಅಲ್ಲದೆ ಅಂಗಡಿ ಮುಗ್ಗಟ್ಟುಗಳನ್ನ ಬಲವಂತವಾಗಿ ಮುಚ್ಚಿಸುವುದಿಲ್ಲ. ಆದರೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದರೆ ಸ್ವಾಗತ ಮಾಡುತ್ತೇವೆ. ಹನುಮಭಕ್ತರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಜೊತೆ ಸೇರಿ ಕೆರಗೋಡಿನಿಂದ ಬೈಕ್ ರ್ಯಾಲಿ ಇರಲಿದೆ. ಕೆರಗೋಡಿನಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಬೈಕ್ ರ್ಯಾಲಿ ನಡೆಯಲಿದೆ. ಬೈಕ್ ರ್ಯಾಲಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

Exit mobile version