Site icon PowerTV

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ!?

ಮಂಡ್ಯ: ಜೆಡಿಎಸ್​ ರಾಜ್ಯ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದು. ಈ ಹಿನ್ನೆಲೆ ಫೆ.19ರಿಂದ ಜಿಲ್ಲಾ ಪ್ರವಾಸ ಆರಂಭಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಎದುರು ಸೋತಿದ್ದರು. ಸೋತ ನೆಲದಲ್ಲೇ ಗೆಲ್ಲಬೇಕೆಂಬ ಉದ್ದೇಶದಿಂದ ಮಂಡ್ಯದಿಂದಲೇ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮಂಡ್ಯ ಬಂದ್​ : ಶಾಸಕ ರವಿ ಗಣಿಗ ಮನೆಯ ಸುತ್ತ ಬಿಗಿ ಬಂದೋಬಸ್ತ್​!

ಅವರು ಕ್ಷೇತ್ರದ 8 ತಾಲ್ಲೂಕುಗಳಲ್ಲೂ ಪ್ರವಾಸ ಮಾಡಲಿದ್ದು, ಮದ್ದೂರು ತಾಲ್ಲೂಕಿನಿಂದ ಆರಂಭಿಸುತ್ತಾರೆ ಎಂದು ಜೆಡಿಎಸ್‌ ದೃಢಪಡಿಸಿದೆ. ಪಕ್ಷದ ಯುವ ಮುಖಂಡರಾಗಿ ಕ್ಷೇತ್ರ ಪ್ರವಾಸ ಆರಂಭಿಸುತ್ತಾರೆ. ಹಾಗಂತ ಅವರೇ ಅಭ್ಯರ್ಥಿಯಾಗುತ್ತಾರೆ ಎಂದೇನಿಲ್ಲ. ಆದರೆ, ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಮೂವರೊಳಗೆ ಒಬ್ಬರು ಸ್ಪರ್ಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಮುಖಂಡರು ಒಮ್ಮತದ ನಿರ್ಣಯ ಕೈಗೊಂಡಿದ್ದೇವೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಮೂಲಗಳು ಹೇಳಿವೆ.

Exit mobile version