Site icon PowerTV

ಮಲ್ಲಿಕಾರ್ಜುನ ಖರ್ಗೆ ಹೊಟ್ಟೆಯಲ್ಲಿ ಕೆಟ್ಟ ಹುಳು ಹುಟ್ಟಿದೆ : ಕೆ.ಎಸ್​. ಈಶ್ವರಪ್ಪ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯಂತವರ ಹೊಟ್ಟೆಯಲ್ಲಿ ಪ್ರಿಯಾಂಕ್​ ಖರ್ಗೆಯಂತಹ ಕೆಟ್ಟ ಹುಳು ಹುಟ್ಟಿದೆ ಎಂದು ಕೆ.ಎಸ್​ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಏನ್ ಏನೋ ಹೇಳಿಕೆ ನೀಡುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೊಟ್ಟೆಯಲ್ಲಿ ಪ್ರಿಯಾಂಕ್ ಎಂಬ ಕೆಟ್ಟ ಹುಳು ಹುಟ್ಟಿದ್ದು ವಿಪರ್ಯಾಸ. ಪ್ರಿಯಾಂಕ ಖರ್ಗೆ ಅಂತವರನ್ನ ಕಾಂಗ್ರೆಸ್ನವರು ಅಂತ ಒಪ್ಪಲ್ಲ. ಕಾಂಗ್ರೆಸ್ ಹೆಸರಿನಲ್ಲಿ ಅಧಿಕಾರ ಹಂಚಿಕೊಂಡವರು ಇವರು ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ಮಾಡಿದರು.

ಸಂಸದ ಡಿ.ಕೆ.ಸುರೇಶ್ ಅವರಿಗೆ ಮೊದಲು ನೋಟಿಸ್ ಕೊಡಲಿ. ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ನಾನು ಎಲ್ಲೂ ಸಂಸದ ಡಿಕೆ ಸುರೇಶ್ ಅವರಿಗೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿಲ್ಲ. ನನಗೆ ನೋಟಿಸ್ ಬಂದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್ಚಿಟ್ ಸಿಗುವ ವಿಶ್ವಾಸ ಇದೆ.ನನ್ನ ವಿರುದ್ಧ ಇನ್ನು 100 FIR ಹಾಕಿ ನಾನು ಹೆದರುವುದಿಲ್ಲ ಎಂದರು.

Exit mobile version