Site icon PowerTV

ಮುಂದಿನ ಜನ್ಮ ಅಂತ ಇದ್ರೆ ಮುಸ್ಲಿಮನಾಗಿ ಹುಟ್ತೀನಿ : ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈಗ ಬಿಜೆಪಿಯವರ ಜತೆ ಸೇರಿಕೊಂಡಿದ್ದಾರೆ. ಅದಕ್ಕೆ ನಿರ್ಮಲಾ ಸೀತಾರಾಮನ್ ಹೇಳಿಕೆ ಸರಿ ಅಂದಿದ್ದಾರೆ ಎಂದು ದೇವೇಗೌಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದೇ ದೇವೇಗೌಡರು, ನಾನು ಮುಂದಿನ ಜನ್ಮ ಅಂತ ಇದ್ರೆ ಮುಸ್ಲಿಮನಾಗಿ ಹುಟ್ತೀನಿ ಅಂದಿದ್ರು. ಈಗ ಏನು ಹೇಳ್ತಾರೆ ದೇವೇಗೌಡರು..? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು ಇದನ್ನೆಲ್ಲ ಹೇಳೋಕ್ಕೆ ಹೋಗಬಾರದು. ದೇವೇಗೌಡರು‌ ಯಜಮಾನರು, ಮಾಜಿ ಪ್ರಧಾನಿಗಳು. ಅವರು ಹೀಗೆಲ್ಲ ಹೇಳಬಾರದು. ಬಿಜೆಪಿ ಜತೆ ಮೈತ್ರಿ ಇದೆ ಅಂತ ಅವರು ಮಾಡಿರುವ ಅನ್ಯಾಯವೆಲ್ಲ ಸರಿ ಅಂತ ಹೇಳಬಾರದು ಎಂದು ಕುಟುಕಿದ್ದಾರೆ.

ಮೈಸೂರು, ಚಾಮರಾಜನಗರ ಎರಡೂ ಗೆಲ್ತೇವೆ

ಸಿಎಂ ತವರು ಮೈಸೂರು ಜಿಲ್ಲೆಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ರಣಕಹಳೆ ವಿಚಾರವಾಗಿ ಮಾತನಾಡಿ, ರಣ ಕಹಳೆ ಅಂದರೇನು..? ನೀವು ಬಳಸುವ ಪದ ಇದೆಯಲ್ಲ ಕಹಳೆ, ಏನದು..? ನಾವು ಈ ಸಲ ಮೈಸೂರು, ಚಾಮರಾಜನಗರ ಎರಡೂ ಕಡೆಯೂ ಗೆಲ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

Exit mobile version