Site icon PowerTV

ಬಹುಮತ ಸಾಬೀತು ಪಡಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರ : ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿಯಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್ ಅವರು ವಿಶ್ವಾಸ ಮತ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಾಪ ಪ್ರಾರಂಭದಲ್ಲಿಯೇ ಆರ್​ಜೆಡಿ ಪಕ್ಷದ ಮೂವರು ಶಾಸಕರು ನಿತೀಶ್​ ಕುಮಾರ್​ಗೆ ಬೆಂಬಲ ಸೂಚಿಸಿದ್ದಾರೆ ಒಟದಟು 243 ಸ್ಥಾನಗಳಲ್ಲಿ 122 ಶಾಸಕರ ಬೆಂಬಲವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ತಮ್ಮ ನೇತೃತ್ವದಲ್ಲಿ ಸರ್ಕಾರವನ್ನು ಭದ್ರಪಡಿಸಿಕೊಂಡಿದ್ದಾರೆ.

ವಿಧಾನಸಭೆ ಸದಸ್ಯರ ಸಂಖ್ಯೆ 243ಕ್ಕೆ ಏರಿಕೆ

129 ಶಾಸಕರು ನಿತೀಶ್ ಕುಮಾರ್ ಅವರನ್ನು ಬೆಂಬಲಿಸಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು 15 ದಿನಗಳ ಹಿಂದಷ್ಟೇ ಮಹಾಘಟಬಂಧನ್ ಮೈತ್ರಿಕೂಟದಿಂದ ಹೊರ ಬಂದು, ಎನ್‌ಡಿಎ ಜೊತೆಗೆ ಸೇರಿ ಹೊಸ ಸರ್ಕಾರ ರಚಿಸಿದ್ದರು. ಪ್ರಸ್ತುತ ಬಿಹಾರ ವಿಧಾನಸಭೆ ಸದಸ್ಯರ ಸಂಖ್ಯೆ 243ಕ್ಕೆ ಏರಿಕೆಯಾಗಿದೆ.

Exit mobile version