Site icon PowerTV

ನಾಳೆ ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ : ಕುರುಬೂರು ಶಾಂತಕುಮಾರ್

ನವದೆಹಲಿ : ನಾಳೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡಲು ತಿರ್ಮಾನಿಸಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭರವಸೆಗಳನ್ನು ನೀಡಿ ಒಂದು ವರ್ಷವಾದರೂ ಕೇಂದ್ರ ಸರ್ಕಾರ ಬೇಡಿಕೆ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ, ಬೆಂಬಲ ಬೆಲೆ ಕಾನೂನು, ಸ್ವಾಮಿನಾಥನ್ ವರದಿ ಅನಿಷ್ಠಾನಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಬೇಡಿಕೆ ಈಡೇರಿಸಿಲ್ಲ. ಈ ಹಿನ್ನಲೆ ಮತ್ತೆ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನನ್ನ ಪತ್ನಿ ಸೇರಿ ಹಲವು ಮಹಿಳೆಯರಿಗೆ ಗಾಯ

ನಾಳಿನ ಪ್ರತಿಭಟನೆಗೂ ಮುನ್ನ ರೈತರನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ. ದೆಹಲಿಗೆ ಆಗಮಿಸುವ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ ನೂರಕ್ಕೂ ಅಧಿಕ ರೈತರನ್ನು ಭೂಪಾಲ್ ನಲ್ಲಿ ಬಂಧಿಸಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದ್ದು, ನನ್ನ ಪತ್ನಿಯೂ ಸೇರಿ ಹಲವು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇಂದು ಸಂಜೆ ಕೇಂದ್ರ ಸಚಿವರ ಜೊತೆಗೆ ಸಭೆ ನಡೆಯಲಿದೆ. ಸಭೆ ಬಳಿಕ ಹೋರಾಟದ ರೂಪುರೇಷೆ ಘೋಷಣೆಯಾಗಲಿದೆ ಎಂದು ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದಾರೆ.

Exit mobile version