Site icon PowerTV

ರಾಜ್ಯ ಬಜೆಟ್ ಅಧಿವೇಶ : ರಾಜ್ಯಪಾಲರ ಭಾಷಣ, ಸರ್ಕಾರದ ಸಾಧನೆಗಳ ಗುಣಗಾನ

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭಾವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದಾರೆ ಈ ವೇಳೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ.

ವಿಧಾನಮಂಡಲ ಬಜೆಟ್​​ ಅಧಿವೇಶನ ಆರಂಭವಾಗಿದ್ದು, ಥಾವರ್ ಚಂದ್ ಗೆಹ್ಲೋಟ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದು, ಮಂಗಳವಾರದಿಂದ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. 16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಇದನ್ನೂ ಓದಿ: ವರ್ತೂರು ಸಂತೋಷ್​ ಜೊತೆ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ ತನಿಷಾ !

ಇಂದು ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ‘ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ. ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದರು.

ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ.

ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ. ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ ಎಂದರು.

Exit mobile version