ಹುಬ್ಬಳ್ಳಿ : ರಾಜ್ಯ ಬಜೆಟ್ ಉಚಿತ ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ ಎಂದು ತಿಳಿಸಿದರು.
ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಉತ್ಸುಕವಾಗಿದೆ. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ. ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿಹಂಚಿ ವಿಜಯೋತ್ಸವ ಆಚರಿಸಿದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ ಎಂದು ಅಸಮಾಧ ವ್ಯಕ್ತಪಡಿಸಿದರು.
ಬಜೆಟ್ ಬಳಿಕ ನಿಗಮ-ಮಂಡಳಿಗೆ ನೇಮಕ
ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆದಿದೆ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬಜೆಟ್ ನಂತರವೇ ನಿಗಮ-ಮಂಡಳಿಗೆ ನೇಮಕ ಮಾಡಲಾಗುವುದು. ಈ ಬಗ್ಗೆ ಯಾರೂ ಅಸಮಾಧಾನಗೊಂಡಿಲ್ಲ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.
ಇಂದು ರಾತ್ರಿ ಸಿಎಂ ಡಿನ್ನರ್ ಪಾರ್ಟಿ
ನಾಳೆ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಹಿನ್ನೆಲೆ ಇಂದು ರಾತ್ರಿ ಸಚಿವರು ಹಾಗೂ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಖಾಸಗಿ ಹೋಟೆಲ್ ನಲ್ಲಿ ಕೈ ನಾಯಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ರಾತ್ರಿ 8 ಗಂಟೆಗೆ ಡಿನ್ನರ್ ಪಾರ್ಟಿ ಆರಂಭವಾಗಲಿದೆ.



Pinco-da canlı yayımlar var. Futbol və idman mərcləri bir arada pinco oyun. Pinco az linkləri daim yenilənir.
Pinco oyunları yüksək keyfiyyətlidir.